ಹಿರಣ್ಣಯ್ಯ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ…

218
firstsuddi

ಬೆಂಗಳೂರು : ಹಿರಿಯ ನಟ ಹಿರಣ್ಣಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.