ಹಿರಿಯ ಸಾಹಿತಿ ಮುಮ್ತಾಜ್ ಬೇಗಂ ವಿಧಿವಶ…

107
firstsuddi

ಉಡುಪಿ : ಐದು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಬೆಳಪು ನಿವಾಸಿ ಮುಮ್ತಾಜ್ ಬೇಗಂ (72) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ ಇದ್ದಾರೆ. ಮುಮ್ತಾಜ್ ಅವರಿಗೆ ಕೋವಿಡ್ ತಗುಲಿತ್ತು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅವ್ಯಕ್ತ, ಪರದೇಶಿ, ವರ್ತುಲ, ಬಂದಳಿಕೆ, ಚಿಂಪಿ, ಸರ್ವ ಋತುಗಳೂ ನಿನಗಾಗಿ, ಅಂಕುರ ಸೇರಿದಂತೆ ಹಲವು ಕಥೆ, ಕವನ, ಕಾದಂಬರಿಗಳನ್ನು ಮುಮ್ತಾಜ್ ಬರೆದಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗೆ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ, ಹಿರಿಯ ನಾಗರಿಕರ ಸಾಹಿತ್ಯ ಪ್ರಶಸ್ತಿ, ಬಸವ ಸಾಹಿತ್ಯ ಕಲಾವೇದಿಕೆಯ ಬಸವಜ್ಯೋತಿ ಪ್ರಶಸ್ತಿಗಳು ಅವರಿಗೆ ಸಂದಿವೆ.