ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ ಕಡೂರು ಪಿಎಸ್ಐ ರಮ್ಯಾ.

80
firstsuddi

ಚಿಕ್ಕಮಗಳೂರು : ಕನ್ನಡ ರಾಜ್ಯೋತ್ಸವದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ರಮ್ಯಾ ಅವರು ಆಕಸ್ಮಿಕ ಸಿನಿಮಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ಕಡೂರು ಆಟದ ಮೈದಾನದಲ್ಲಿ ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮ ಮುಗಿದ ಬಳಿಕ ಕನ್ನಡಾಭಿಮಾನಿಗಳು ಕನ್ನಡ ಹಾಡಿಗೆ ಕುಣಿಯುತ್ತಿದ್ದರು. ಇದೇ ವೇಳೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಎಸ್‍ಐ ರಮ್ಯಾ ಕೂಡ ಜನಸಾಮಾನ್ಯರ ಜೊತೆ ಸೇರಿ ಕುಣಿದು ಕುಪ್ಪಳಿಸಿದ್ದಾರೆ.