ಚಾಮರಾಜನಗರ : ಉಪನ್ಯಾಸಕಿಯೊಬ್ಬರು ತಮ್ಮ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ
ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ (26) ಆತ್ಮಹತ್ಯೆ ಮಾಡಿಕೊಂಡವರು. ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿದ್ದ ಇವರು, ಡೆತ್ನೋಟ್ ಬರೆದಿಟ್ಟು ಚಾಮರಾಜನಗರದ ಜೆಎಸ್ಎಸ್ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಮಾನಸಿಕ ಒತ್ತಡದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ. ಚಾಮರಾಜನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










