ಹುಬ್ಬಳ್ಳಿ : ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ..!

70
firstsuddi

ಹುಬ್ಬಳ್ಳಿ : ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಚೇರಿಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ  ನಡೆಯುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.  

ಎಸಿಬಿ ಎಸ್ ಪಿ ಎಸ್. ನ್ಯಾಮೇಗೌಡ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಸತತವಾಗಿ ಕೆಐಎಡಿಬಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿ ನೈಜ ಫಲಾನುಭವಿಗಳಿಗೆ ಪರಿಹಾರ ನೀಡದೇ, ವ್ಯಾಜ್ಯಗಳು ನ್ಯಾಯಾಲಯದಲ್ಲಿರುವ ಪರಿಹಾರ ವಿತರಣೆ ಮಾಡಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಕೆಐಎಡಿಬಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿ ತನಿಖೆ ಮುಂದುವರಿಸಿದ್ದಾರೆ.