ಹುಬ್ಬಳ್ಳಿ : ಲಾಭದ ಆಮಿಷವೊಡ್ಡಿ ಉದ್ಯಮಿಗೆ ವಂಚನೆ…

63
firstsuddi

ಹುಬ್ಬಳ್ಳಿ : ಲಾಭದ ಆಮಿಷವೊಡ್ಡಿ ಉದ್ಯಮಿ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವವವರು ಮೋಸ ಹೋದವರು. ಗುರುಮೂರ್ತಿ ಅವರಿಗೆ ಅಪರಿಚಿತ ಮಹಿಳೆಯೊಬ್ಬಳು ಲಕ್ಷ್ಮೀ ಮೆಹರ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದಾಳೆ. ಪ್ಲಿಪ್ಕಾರ್ಟ್ ಕಂಪನಿಯ ಪ್ರಾಜೆಕ್ಟ್ ನಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂದು ನಂಬಿಸಿ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 32 ಲಕ್ಷ ರೂ.ಗಳನ್ನು ಆನ್ ಲೈನ್ ಮೂಲಕ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ.

ಪದೇ ಪದೇ ಹಣ ಹಾಕು ಎಂದು ಕೇಳುತ್ತಿದ್ದಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ – ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.