ಹುಲಿ ಉಗುರು ಧರಿಸಿದ ಆರೋಪ- ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ…

61
firstsuddi

ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು ಧರಿಸಿದ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ದೂರು ಕೂಡ ದಾಖಲಾಗಿತ್ತು. ಇಂದು ಅರಣ್ಯಾಧಿಕಾರಿಗಳು ದರ್ಶನ್ ಮನೆಗೆ ಭೇಟಿ ನೀಡಿದ್ದಾರೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಸದ್ಯ ದರ್ಶನ್ ಮೈಸೂರಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ದರ್ಶನ್‌ಗೆ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.

ದರ್ಶನ್ ಬಳಿಕ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಜಗ್ಗೇಶ್ ಹುಟ್ಟುರಿನಲ್ಲಿದ್ದಾರೆ. ಈ ಹಿನ್ನೆಲೆ ಅವರ ಪತ್ನಿ ಪರಿಮಳರಿಗೆ ನೋಟಿಸ್ ಕೊಡುವ ಸಾಧ್ಯತೆಯಿದೆ.