ಹೃದಯಘಾತದಿಂದ ವಧು ಸಾವು…

190
Firstsuddi

ಮಂಗಳೂರು : ಮದುವೆಯಾದ ಮೊದಲ ರಾತ್ರಿಯೇ ನವವಧು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.

ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಹೆಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಅವರು ನಿನ್ನೆಯಷ್ಟೇ ಕಣ್ಣೂರಿನ ಮದುಮಗ ಮುಬಾರಕ್ ಎಂಬವರೊಂದಿಗೆ ವಿವಾಹವಾಗಿದ್ದರು. ಅಡ್ಯಾರ್ ಗಾರ್ಡನ್‌ನಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿಯು ಅತ್ಯಂತ ಲವಲವಿಕೆಯಿಂದಿದ್ದರು. ಆದರೆ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.