ಹೃದಯಾಘಾತದಿಂದ ಅರಭಾವಿಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ…

72
firstsuddi

ಬೆಳಗಾವಿ: ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.

ಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಮಠಕ್ಕೆ ಆಗಮಿಸಿದ್ದಾರೆ.

ಇಂದು ನಾಡಿನ ಹಲವು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ.