ನವದೆಹಲಿ: ವ್ಯಕ್ತಿಯೊಬ್ಬ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಭಿಷೇಕ್ ಅಹ್ಲುವಾಲಿ(25) ಹೃದಯಾಘಾತದಿಂದ ಮೃತಪಟ್ಟ ಪತಿ. ಇದಾದ 24 ಗಂಟೆಗಳ ಬಳಿಕ ಪತಿ ಸಾವಿನ ಆಘಾತದಿಂದ ಅಂಜಲಿ, ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ವರ್ಷದ ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದರು. ನಿನ್ನೆ ಇಬ್ಬರೂ ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್‌ಗೆ ಎದೆನೋವು ಕಾಣಿಸಿಕೊಂಡಿತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದರು. ನಂತರ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಬಳಿಕ ಹೃದಯಾಘಾತದಿಂದ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪತಿಯ ಮರಣದ ಆಘಾತ ಸಹಿಸಲಾಗದೆ ಅಂಜಲಿ ಏಳನೇ ಮಹಡಿಯ ಬಾಲ್ಕನಿಗೆ ಧಾವಿಸಿ ಜಿಗಿದಿದ್ದಾರೆ. ಗಂಭೀರ ಗಾಯಗೊಂಡ ಆಕೆಯನ್ನು ವೈಶಾಲಿಯ ಮ್ಯಾಕ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಇಂದು ಮುಂಜಾನೆ ಆಕೆಯೂ ಕೊನೆಯುಸಿರೆಳೆದಿದ್ದಾಳೆ.










