ಚಿಕ್ಕಮಗಳೂರು: ಜಿಲ್ಲೆಯ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಭೋಜೆಗೌಡ(74) ಅವರು ಹೆಜ್ಜೇನು ದಾಳಿಗೆ ಬಲಿಯಾಗಿದ್ದಾರೆ.
ತಾಲೂಕಿನ ಅರಿಶಿನಗುಪ್ಪೆ ಸಮೀಪವಿರುವ ಕೃಷ್ಣಗಿರಿ ಕಾಫಿ ಎಸ್ಟೇಟ್ನಲ್ಲಿ ದುರ್ಘಟನೆ ನಡೆದಿದೆ. ಸಾವಿರಾರು ಹೆಜ್ಜೇನುಗಳು ದಾಳಿ ಮಾಡಿದ್ದರಿಂದ ಭೋಜೆಗೌಡರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭೋಜೇಗೌಡರು ಸತತ 2ನೇ ಬಾರಿಗೆ ಕಾಫಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು.










