ಬೆಂಗಳೂರು : ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಮೃತಾಳನ್ನು ಕೆ.ಆರ್. ಪುರಂ ಪೊಲೀಸರು ಬಂಧಿಸಿದ್ದಾರೆ. ಫೆ.1ರಂದು ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಲೆ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದರು. ಇಬ್ಬರು ಅಂಡಮಾನ್ ನಿಕೋಬಾರ್ನ ಪೋರ್ಟ್ ಬ್ಲೇರ್ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದ ಕೆ.ಆರ್. ಪುರಂನ ಇನ್ಸ್ಪೆಕ್ಟರ್ ಅಂಬರೀಷ್ ನೇತೃತ್ವದ ತಂಡ ಕಾರ್ಯಾಚರಣೆ ಆರಂಭಿಸಿ ಆರೋಪಿಗಳಾದ ಅಮೃತಾ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.










