ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಯೋಧರ ಪಾರ್ಥಿವ ಶರೀರ ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ಅಪಘಾತ..!

43
firstsuddi

ಚೆನ್ನೈ : ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರ ಮೃತದೇಹ ಹೊತ್ತು ಸಾಗುತ್ತಿದ್ದ ಆ್ಯಂಬುಲೆನ್ಸ್ ವೊಂದು ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳಯಂನಲ್ಲಿ ನಡೆದಿದೆ.

ಪಾರ್ಥಿವ ಶರೀರಗಳನ್ನು ಆ್ಯಂಬುಲೆನ್ಸ್ ನಲ್ಲಿ ಸೂಲೂರು ಏರ್ ಬೇಸ್ ಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದ್ದು, ಅದರ ಮುಭಾಂಗ ಜಖಂಗೊಂಡಿದೆ. ಅಪಘಾತದ ವೇಳೆ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ತಕ್ಷಣವೇ ಯೋಧರ ಪಾರ್ಥಿವ ಶರೀರವನ್ನ ಬೇರೊಂದು ಆ್ಯಂಬುಲೆನ್ಸ್ ಗೆ ಸ್ಥಳಾಂತರಿಸಿ ರವಾನೆ ಮಾಡಲಾಯಿತು.