ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ವೈಯುಕ್ತಿಕ ಸಮಸ್ಯೆ ಹಾಗೂ ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಾಸ್ ಬಂದಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಪಟ್ಟಣದ ಹೇಮಾವತಿ ನದಿಗೆ ಜಿಗಿದು ಸತ್ತಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತ್ತಾರ್ ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವ ಪತ್ತೆಯಾಗದ ಹಿನ್ನಲೆಯಲ್ಲಿ ಕುಂದಾಪುರದ ಮುಳುಗು ತಜ್ಞರಿಂದ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ.










