ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ – ಮತ್ತೋರ್ವ ಆರೋಪಿ ಪೊಲೀಸ್ ವಶಕ್ಕೆ…

52
firstsuddi

ಬೆಂಗಳೂರು : ಹಿಜಾಬ್ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು ಮೂಲದ ಜಮಾಲ್ ಮಹಮ್ಮದ್ ಉಸ್ಮಾನಿ ಎಂಬಾತನನ್ನು ಎಂಟು ದಿನಗಳ ಕಾಲ ವಶಕ್ಕೆ ಪಡೆದುಕೊಂಡ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ತಮಿಳುನಾಡು ತೌಹೀದ್ ಜಮಾತ್ ನ ಸದಸ್ಯರಾಗಿದ್ದ ರಹಮತ್ ಉಲ್ಲಾನನ್ನು ಇತ್ತೀಚೆಗೆ ತಂಜಾವೂರಿನಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದರು. ನಂತರ ಹೆಚ್ಚಿನ ವಿಚಾರಣೆಗಾಗಿ ನಗರ ಪೊಲೀಸರು ಕರೆತಂದಿದ್ದರು.

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠ ಹಿಜಾಬ್ ಧಾರಣೆ ಕಡ್ಡಾಯವಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ತೀರ್ಪು ನೀಡಿತ್ತು.