ಹೊಸ ದಾಖಲೆ : ಒಂದೇ ದಿನ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’

75
firstsuddi

ಹೊಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಸಿನಿಮಾ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಹವಾ ಸೃಷ್ಟಿಸಿದೆ.ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ.

‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು. ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರ ಒಂದೇ ದಿನ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ.

‘ಕಾಂತಾರ’ ಚಿತ್ರದಲ್ಲಿ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯನ್ನು ಹೇಳಲಾಗಿದೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್ ಮುಂತಾದ ಕಲಾವಿದರ ಪಾತ್ರಗಳು ಹೈಲೈಟ್ ಆಗಿವೆ. ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.