ಹೊಸ ವರ್ಷದ ಆಚರಣೆಗೆ ಗೋವಾಗೆ ತೆರಳುತ್ತಿದ್ದಾಗ ಅಪಘಾತ.

54

ಹಾವೇರಿ: ನಿಂತಿದ್ದ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದು 4 ಜನರು ಗಂಭೀರವಾಗಿ ಗಾಯಗೊಂಡು, 6 ಮಂದಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ಸಂಭವಿಸಿದೆ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ನ್ಯೂ ಇಯರ್ ಪಾರ್ಟಿ ಮಾಡಲೆಂದು ಗೋವಾಗೆ ತೆರಳುತ್ತಿದ್ದ ಆಂಧ್ರ ಮೂಲದ ಯುವಕರ ತಂಡ ಕಾರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಮೂಲದ ದೀಪಕ್, ತೇಜಸ್, ವೆಂಕಟೇಶ್ ಮತ್ತು ಸಂದೇಶ್ ಎಂದು ಗುರುತಿಸಲಾಗಿದೆ. ಗೌಡನಬಿ, ವೀರೇಶ್, ಸಾಗರ್, ಲಕ್ಷ್ಮಣ, ಸಂಕೇತ್ ಮತ್ತು ಅಶೋಕ್ ಎಂದು ಗುರುತಿಸಲಾಗಿದೆ. ಗಾಯಗೊಂಡವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ 4 ಮಂದಿಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.